ಅಹಮದಾಬಾದ್ : ಮಹತ್ವದ ಬೆಳವಣಿಗೆಯೊಂದರಲ್ಲಿ ಗುಜರಾತ್ ಐಪಿಎಸ್ ಅಧಿಕಾರಿಗಳ ಸಂಘ ಅಮಾನತ್ತಾಗಿ ಜೈಲಿನಲ್ಲಿರುವ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ ಬೆಂಬಲಕ್ಕೆ ನಿಲ್ಲುವ ಮೂಲಕ ಸಂಜೀವ್ ಭಟ್ ಅವರ ಹೋರಾಟಕ್ಕೆ ಆನೆ ಬಲ ಬಂದಂತಾಗಿದೆ . ನಿನ್ನೆ ಇಲ್ಲಿ ನಡೆದ ಐಪಿಎಸ್ ಅಧಿಕಾರಿಗಳ ಸಂಘದ ಸಭೆಯಲ್ಲಿ ಸಂಜೀವ್ ಭಟ್ ಅವರಿಗೆ ಬೆಂಬಲ ವ್ಯಕ್ತಪಡಿಸುವ ನಿರ್ಣಯ ಕೈಗೊಳ್ಳಲಾಯಿತು.
ನಿರ್ಣಯ ಕೈಗೊಂಡ ನಂತರ ಸಂಜೀವ್ ಭಟ್ ಅವರ ಮನೆಗೆ ಭೇಟಿ ನೀಡಿದ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ತಂಡ ಸಂಘದ ನಿರ್ಣಯವನ್ನು ನಮಗೆ ತಿಳಿಸಿದ್ದಾಗಿ ಸಂಜೀವ್ ಭಟ್ ಪತ್ನಿ ಶ್ವೇತಾ ಹೇಳಿದ್ದಾರೆ. ಸದ್ಯಕ್ಕೆ ಜೈಲಿನಲ್ಲಿರುವ ಸಂಜೀವ್ ಭಟ್ ಜಾಮೀನು ಅರ್ಜಿಯ ವಿಚಾರಣೆ ಸೋಮವಾರ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಲಿದೆ.
No comments:
Post a Comment