ಶಿವಮೊಗ್ಗ : ೨೦೦೨ ರಲ್ಲಿ ಗುಜರಾತಿನಲ್ಲಿ ನಡೆದ ಹತ್ಯಾಕಾಂಡದಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯ ಪಾತ್ರವನ್ನು ಬಯಲಿಗೆಳೆದ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಬಂಧಿಸಿ ದೈಹಿಕ ಹಾಗೂ ಮಾನಸಿಕ ಚಿತ್ರಹಿಂಸೆ ನೀಡುತ್ತಿರುವ ಗುಜರಾತ್ ಸರ್ಕಾರದ ಕ್ರಮವನ್ನು ಖಂಡಿಸಿ ಮತ್ತು ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು .
ನಗರದ ಅಮೀರ್ ಅಹ್ಮದ್ ವೃತ್ತದಿಂದ ಮೆರವಣಿಗೆ ಮೂಲಕ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಪರ್ವೇಜ್ ಅಹ್ಮದ್ , ಉಪಾಧ್ಯಕ್ಷ ತಬ್ರೀಜ್ ಮತ್ತು ಪ್ರಧಾನ ಕಾರ್ಯದರ್ಶಿ ಶಾಹಿದ್ ಖಾನ್ ವಹಿಸಿದ್ದರು .
No comments:
Post a Comment